ಕೃಷ್ಣಾ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸಂಬಂಧಪಟ್ಟ ರಾಜ್ಯ ಸರ್ಕಾರಗಳೊಂದಿಗೆ ಶೀಘ್ರದಲ್ಲೇ ಸಭೆ ಕರೆಯಲು ಕೇಂದ್ರ ಒಪ್ಪಿಕೊಂಡಿದೆ" ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನವದೆಹಲಿ: ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶವನ್ನು ಒಳಗೊಂಡ ದಶಕಗಳಷ್ಟು ಹಳೆಯದಾದ ಕೃಷ್ಣಾ ನೀರು ಹಂಚಿಕೆ ವಿವಾದದ ಕುರಿತು ಒಮ್ಮತ ಮೂಡಿಸಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಭೆ ಕರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.
"ಕೃಷ್ಣಾ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸಂಬಂಧಪಟ್ಟ ರಾಜ್ಯ ಸರ್ಕಾರಗಳೊಂದಿಗೆ ಶೀಘ್ರದಲ್ಲೇ ಸಭೆ ಕರೆಯಲು ಕೇಂದ್ರ ಒಪ್ಪಿಕೊಂಡಿದೆ" ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಗುರುವಾರ ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ಪಡೆಯಲು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿತು.
Post a Comment